Monday, June 8, 2026
Homeತಾಜಾ ಸುದ್ದಿಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

- Advertisement -
- Advertisement -

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಿದರು.

ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀ ಪರವಾಗಿ ವಕೀಲ ಕೆ.ಎನ್.ವಿಶ್ವನಾಥಯ್ಯ ಅವರು ಆ.29ರಂದು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡರು.

- Advertisement -

Latest News

error: Content is protected !!