Saturday, June 13, 2026
Homeತಾಜಾ ಸುದ್ದಿಮುರುಘಾ ಶ್ರೀಗಳ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಮುರುಘಾ ಶ್ರೀಗಳ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

- Advertisement -
- Advertisement -

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿರುವ ಮುರುಘಾ ಶ್ರೀಗಳ  ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ನೀಡಲಾಗಿದೆ. ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಶ್ರೀಗಳಿಗೆ ನಿರಾಸೆಯಾಗಿದೆ.  ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿತ್ತು. ಅವರ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಸ್ವಾಮೀಜಿಯನ್ನು ಪೊಲೀಸರು ಬಂಧಿಸಲಾಗಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇನ್ನೂ ಪೋಕ್ಸೋ ಕೇಸ್ ನಲ್ಲಿ ಜಾಮೀನು ಕೋರಿ ಮುರುಘಾ ಶ್ರೀ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು, ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ. ಹೀಗಾಗಿ ಇಂದು ಕೂಡ ಸ್ವಾಮೀಜಿಗೆ ಜಾಮೀನು ದೊರೆತಿಲ್ಲ.

ಇದೇ ಪ್ರಕರಣದಲ್ಲಿ ಗಂಗಾಧರಯ್ಯ ಎಂಬುವರು ನಿನ್ನೆಯಷ್ಟೇ ಪೊಲೀಸರ ಮುಂದೆ ಶರಣಾಗಿದ್ದರು. ಅಲ್ಲದೇ ಮತ್ತೋರ್ವ ಆರೋಪಿ ಲೇಡಿ ವಾರ್ಡನ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು.

- Advertisement -

Latest News

error: Content is protected !!