Wednesday, June 3, 2026
Homeತಾಜಾ ಸುದ್ದಿಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು; ಬೇಲ್ ಸಿಕ್ಕರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು; ಬೇಲ್ ಸಿಕ್ಕರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

- Advertisement -
- Advertisement -

ಬೆಂಗಳೂರು; ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಬೇಲ್ ಸಿಕ್ಕರೂ ಶ್ರೀಗಳಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ಇನ್ನೂ ಒಂದು ಪ್ರಕರಣದಲ್ಲಿ ಜಾಮೀನು ದೊರೆಯಬೇಕಿರುವಂತ ಕಾರಣ, ಜೈಲೇ ಗತಿ ಎನ್ನುವಂತಾಗಿದೆ.

ಮುರುಘಾ ಶ್ರೀಗಳು ಹೈಕೋರ್ಟ್ ಗೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಏಳು ಷರತ್ತುಗಳನ್ನು ವಿಧಿಸುವುದರೊಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಹೈಕೋರ್ಟ್ ವಿಧಿಸಿರುವಂತ ಷರತ್ತುಗಳಲ್ಲಿ ಚಿತ್ರದುರ್ಗ ಪ್ರವೇಶಿಸುವಂತಿಲ್ಲ. ಪಾಸ್ ಪೋರ್ಟೋ ಕೋರ್ಟ್ ವಶಕ್ಕೆ ನೀಡಬೇಕು, ಸಾಕ್ಷ್ಯ ನಾಶಪಡಿಸುವಂತಿಲ್ಲ. ಇಬ್ಬರ ಶ್ಯೂರಿಟಿಗಳನ್ನು ಒದಿಗಸಬೇಕು. ಇಂತಹ ಕೃತ್ಯಗಳನ್ನು ಪುನರಾವರ್ತಿಸುವಂತಿಲ್ಲ. ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಬೇಕು ಈ ಏಳು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ.

ಇನ್ನೂ ಒಂದು ಪ್ರಕರಣದಲ್ಲಿ ಜಾಮೀನು ಅರ್ಜಿ ಬಾಕಿ ಇರುವ ಕಾರಣ, ಆ ಪ್ರಕರಣದಲ್ಲೂ ಜಾಮೀನು ದೊರೆತ ನಂತ್ರ ಜೈಲಿನಿಂದ ರಿಲೀಸ್ ಆಗಲಿದ್ದಾರೆ.

- Advertisement -

Latest News

error: Content is protected !!