- Advertisement -
![]()
- Advertisement -
ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2023-24ನೇ ಸಾಲಿನ ಕರ್ನಾಟಕ ಕಲಾಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಕರ್ನಾಟಕ ಸಂಗೀತ ವಿಭಾಗದಲ್ಲಿ ಮಂಗಳೂರಿನ ಸ್ಯಾಕ್ಸೋಪೋನ್ ವಾದಕ ಕದ್ರಿ ರಮೇಶ್ ನಾಥ್ ಅವರಿಗೆ ವಾರ್ಷಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಒಟ್ಟು ಎಂಟು ವಿಭಾಗಗಳಲ್ಲಿ ವಾರ್ಷಿಕ ಪ್ರಶಸ್ತಿ ಮತ್ತು ಇಬ್ಬರಿಗೆ ಗೌರವ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಗೌರವ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಯೊಂದಿಗೆ ಐವತ್ತು ಸಾವಿರ ರೂಪಾಯಿಗಳ ಗೌರವ ಧನ ಮತ್ತು ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ಇಪ್ಪತ್ತೈದು ಸಾವಿರ ರೂಪಾಯಿಗಳ ಗೌರವ ಧನ ನೀಡಲಾಗುತ್ತದೆ.
- Advertisement -


