Wednesday, May 15, 2024
Homeತಾಜಾ ಸುದ್ದಿಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು; ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ  ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ವಿಷಯ ತಿಳಿದು ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಗಿದೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಹಂಸಲೇಖ ಅವರು ಓಪನ್​ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!