Wednesday, June 3, 2026
Homeತಾಜಾ ಸುದ್ದಿಮಂಗಳೂರು: ಮುಖ್ಯಮಂತ್ರಿಯ ತಾರತಮ್ಯ ನೀತಿಗೆ ಖಂಡನೆ: ಶಾಂತಿ ಸಭೆಗೆ ಮುಸ್ಲಿಂ ಸಮುದಾಯ ಬಹಿಷ್ಕಾರ

ಮಂಗಳೂರು: ಮುಖ್ಯಮಂತ್ರಿಯ ತಾರತಮ್ಯ ನೀತಿಗೆ ಖಂಡನೆ: ಶಾಂತಿ ಸಭೆಗೆ ಮುಸ್ಲಿಂ ಸಮುದಾಯ ಬಹಿಷ್ಕಾರ

- Advertisement -
- Advertisement -

ಮಂಗಳೂರು: ಕಳೆದ ಹಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಭೆ ಕರೆಯಲಾಗಿದೆ. ಆದ್ರೆ ಈ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘ ಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆಗೆ ಆಹ್ವಾನ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ತಾರತಮ್ಯ ನೀತಿಯನ್ನು ಖಂಡಿಸಿ ಇಂದಿನ ಸಭೆಗೆ ಮುಸ್ಲಿಂ ಸಮುದಾಯ ಬಹಿಷ್ಕಾರ ಹಾಕಿದೆ.

ಮುಸ್ಲಿಂ ಸೆಂಟ್ರಲ್ ಕಮಿಟಿ, SKSSF, PFI, ಜಮಾತೆ ಇಸ್ಲಾಮ್ ಸೇರಿ ಹಲವು ಮುಸ್ಲಿಂ ಸಂಘಟನೆಗಳು ಬಹಿಷ್ಕಾರ ಹಾಕಿವೆ. ಈ ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಮಂಗಳೂರು ನಗರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿ ಜಿ.ಪ.ಸಿಇಒ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.

- Advertisement -

Latest News

error: Content is protected !!