Friday, May 3, 2024
Homeತಾಜಾ ಸುದ್ದಿಬೌದ್ಧ ಧರ್ಮ ಸ್ವೀಕರಿಸಿ, ಭಿಕ್ಕು ದೀಕ್ಷೆ ಪಡೆದು ಮುಸ್ಲೀಂ ಸಮುದಾಯದ ವ್ಯಕ್ತಿ

ಬೌದ್ಧ ಧರ್ಮ ಸ್ವೀಕರಿಸಿ, ಭಿಕ್ಕು ದೀಕ್ಷೆ ಪಡೆದು ಮುಸ್ಲೀಂ ಸಮುದಾಯದ ವ್ಯಕ್ತಿ

spot_img
- Advertisement -
- Advertisement -

ಚಾಮರಾಜನಗರ: ಚಾಮರಾಜನಗರದ ಸಾರನಾಥ ಬೌದ್ಧ ವಿಹಾರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಬೌದ್ಧ ಧರ್ಮ ಸ್ವೀಕರಿಸಿ, ಭಿಕ್ಕು ದೀಕ್ಷೆ ಪಡೆದಿದ್ದಾರೆ.

ತೆಲಂಗಾಣದ ಹೈದರಾಬಾದ್ ನಿವಾಸಿ ಶಹವನಾಜ್ ಆಲಿ (40) ಬುದ್ಧನ ಪಂಚಶೀಲತತ್ವಗಳಿಗೆ ಆಕರ್ಷಿತರಾಗಿ ಬಂತೇ ಭೋಧಿದತ್ತ ಅವರ ಸಮ್ಮುಖದಲ್ಲಿ ಬೌದ್ಧ ಭಿಕ್ಕು ದೀಕ್ಷೆ ಪಡೆದರು. ಧಮ್ಮ ಕ್ರಾಂತಿ ಬಂತೇಜಿಯಾಗಿ ಮರು ನಾಮಕರಣಗೊಂಡಿದ್ದಾರೆ. ಧಮ್ಮ ಕ್ರಾಂತಿ ಬಂತೇಜಿ ಅವರು ಆಟೋಮೊಬೈಲ್ಸ್ ನಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆ.

ಬೌದ್ಧಧರ್ಮ ಧರ್ಮ ಸ್ವೀಕರಿಸಿ ಮಾತನಾಡಿದ ಅವರು, ಕಳೆದ 10 ವರ್ಷದಿಂದ ಬೌದ್ಧ ಧರ್ಮವನ್ನು ಅಧ್ಯಯನ ಮಾಡಿದೆ. 5 ವರ್ಷದ ಹಿಂದೆ ನಾಗಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಧಮ್ಮ ದೀಕ್ಷೆ ಸ್ಥಳಕ್ಕೆ ಭೇಟಿ ನೀಡಿ ನಾನು ಗಡ್ಡವನ್ನು ತೆಗೆದೆ. ಅಂದಿನಿಂದಲೇ ಧ್ಯಾನವನ್ನು ಅಭ್ಯಸಿಸುತ್ತಿದ್ದೇನೆ. ಬೌದ್ಧ ಧರ್ಮ ಸ್ವೀಕಾರಕ್ಕೆ ಯಾರದೇ ವಿರೋಧವಿದ್ದರೂ ನನಗೆ ಭಯವಿಲ್ಲ. ಸಂವಿಧಾನಕ್ಕಾಗಿ, ಸಮಾಜಕ್ಕಾಗಿ ಜೀವನದಲ್ಲಿ ಶಾಂತಿ ಬಯಸಿ ಭಿಕ್ಕುವಾಗಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!