ಮಂಗಳೂರು: ಮಾಟ, ಮಂತ್ರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆಂದು ನಂಬಿಸಿದ್ದ ಆರೋಪಿ, ಆಕೆಗೆ ಪರಿಹಾರ ಒದಗಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಚಿಕಿತ್ಸೆಯ ನೆಪದಲ್ಲಿ ಆರೋಪಿ ಕೂಳೂರು ಉಸ್ತಾದ್ 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎನ್ನಲಾಗಿದೆ. ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕುಟುಂಬಸ್ಥರು.ಹೆಜಮಾಡಿಯಲ್ಲಿದ್ದ ಕೂಳೂರು ಉಸ್ತಾದ್ ನನ್ನು ಭೇಟಿ ಮಾಡಿದ್ದರು. ಮಹಿಳೆಯನ್ನು ನೋಡಿ ಆರೋಪಿ ಆಕೆಗೆ ಯಾರೋ ಮಾಟ ಮಾಡಿಸಿದ್ದಾರೆ ಎಂದು ನಂಬಿಸಿದ್ದ. ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಮಹಿಳೆಯನ್ನು ಆಗಾಗ ಬರಲು ಹೇಳುತ್ತಿದ್ದ ಉಸ್ತಾದ್. ಚಿಕಿತ್ಸೆ ಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಚಿಕಿತ್ಸೆ ನೆಪದಲ್ಲಿ 1 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ ಪ್ರಕರಣದ ಬಗ್ಗೆ ತನಿಖೆ ನಡೆಸಿ ಪೊಲೀಸರು ಅಬ್ದುಲ್ ಕರೀಮ್ ನನ್ನು ಬಂಧಿಸಿದ್ದಾರೆ.