Thursday, June 25, 2026
Homeತಾಜಾ ಸುದ್ದಿಮೋದಿ ಬಗ್ಗೆ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿಸಿದ ಮುಸ್ಲಿಂ ಯುವಕರು

ಮೋದಿ ಬಗ್ಗೆ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿಸಿದ ಮುಸ್ಲಿಂ ಯುವಕರು

- Advertisement -
- Advertisement -

ಮೈಸೂರು: ಮೋದಿ ಬಗ್ಗೆ ಹಾಡು ಬರೆದಿದ್ದಕ್ಕೆ ಮುಸ್ಲಿಂ ಯುವಕರು ಹಿಂದೂ ಯುವಕನಿಗೆ ಥಳಿಸಿದ ಘಟನೆ ಮೈಸೂರಲ್ಲಿ ನಡೆದಿದೆ.

ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಪ್ರಧಾನಿ ಮೋದಿ ಬಗ್ಗೆ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ.

ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿಯಲ್ಲಿ ರೋಹಿತ್ ಎಂಬಾತನ ಮೇಲೆ ಮುಸ್ಲೀಂ ಯುವಕರು ನರೇಂದ್ರ ಮೋದಿ ಹಾಡು ಮಾಡಿದ್ದೀಯ. ನಿನ್ನ ಸಾಯಿಸುತ್ತೇನೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸಲ್ಲಿಸಿರೋ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನೂ ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ಯುವಕ ನೇರವಾಗಿ ಮೈಸೂರು ಲಕ್ಷ್ಮೀ ಪುರಂ ಠಾಣೆಗೆ ತೆರಳಿ ದೂರು ನೀಡಿದ್ದು, ಆ ಬಳಿಕ ಪೊಲೀಸರೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

- Advertisement -

Latest News

error: Content is protected !!