Wednesday, June 24, 2026
Homeತಾಜಾ ಸುದ್ದಿಸರ್ಕಾರಿ ಶಾಲೆಯಲ್ಲಿ ಹಿಂದೂ ದೇವಾಲಯ ನಿರ್ಮಿಸಿ ಕೊಟ್ಟ ಮುಸ್ಲಿಂ ವ್ಯಕ್ತಿ

ಸರ್ಕಾರಿ ಶಾಲೆಯಲ್ಲಿ ಹಿಂದೂ ದೇವಾಲಯ ನಿರ್ಮಿಸಿ ಕೊಟ್ಟ ಮುಸ್ಲಿಂ ವ್ಯಕ್ತಿ

- Advertisement -
- Advertisement -

ಕೋಲಾರ: ಹಿಜಾಬ್, ಆಜಾನ್ ಗದ್ದಲದ ನಡುವೆ ಹಿಂದೂ ಮುಸ್ಲಿಂ ಸಾಮರಸ್ಯ ಸಾರುವ ಘಟನೆಯೊಂದು ನಡೆದಿದೆ. ಸೂಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಟಿಪ್ಪು ಸೆಕ್ಯುಲರ್ ಸೇನೆ ರಾಜ್ಯಾಧ್ಯಕ್ಷ ಆಸೀಫ್ ಎಂಬವರು ಗಣೇಶ ದೇವಾಲಯವೊಂದನ್ನು ನಿರ್ಮಾಣ ಮಾಡಿ ಶಾಲೆಗೆ ಕೊಡುಗೆಯಾಗಿ ಕೊಡುವ ಮೂಲಕ ಹಿಂದೂ ಮುಸ್ಲಿಂ ಎಲ್ಲಾ ಧರ್ಮಗಳು ಒಂದೇ ಎಂಬ ಸಂದೇಸ ಸಾರಿದ್ದಾರೆ.

ಆಸೀಫ್ ಅವರು ಸೂಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಸುಮಾರು 3.5 ಲಕ್ಷ ರೂಪಾಯಿ ವೆಚ್ಚದಲ್ಲಿ ಪುಟ್ಟದೊಂದು ಗಣೇಶ ದೇವಾಲಯ ನಿರ್ಮಾಣ ಮಾಡಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ  ಆಸೀಫ್, ಟಿಪ್ಪು ಕೂಡಾ ಹಲವು ಹಿಂದೂ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಅವರ ಆಶಯದಂತೆ ನಾವು ಹಿಂದೂ ದೇವಾಲಯ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!