- Advertisement -
- Advertisement -
ಬೆಂಗಳೂರು, ಎ.30: ತೀವ್ರ ಅನಾರೋಗ್ಯ ಹಿನ್ನೆಲೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಎರಡು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು, ಅವರನ್ನು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮುತ್ತಪ್ಪ ರೈ ಅವರಿಗೆ 2018ರಲ್ಲಿ ಕ್ಯಾನ್ಸರ್ ರೋಗ ದೃಢಪಟ್ಟಿತ್ತು ಎಂದು ಹೇಳಲಾಗುತ್ತಿದೆ.
- Advertisement -