Thursday, June 4, 2026
Homeಪ್ರಮುಖ-ಸುದ್ದಿಮುತ್ತಪ್ಪ ರೈ ಪುತ್ರ ರಿಕ್ಕಿ ರೈಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮುತ್ತಪ್ಪ ರೈ ಪುತ್ರ ರಿಕ್ಕಿ ರೈಯನ್ನು ಬಂಧಿಸಿದ ಸಿಸಿಬಿ ಪೊಲೀಸರು

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರನ್ನು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ರಿಕ್ಕಿ ರೈ ಅವರು ಡ್ರಗ್ಸ್ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ರಿಕ್ಕಿ ರೈ ಮನೆಗಳ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿ, ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ರಿಕ್ಕಿ ರೈ ಕಾರನ್ನು ಪರಿಶೀಲನೆ ನಡೆಸಿದ ಬಳಿಕ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಗೇ ರಿಕ್ಕಿ ರೈ ಆದಿತ್ಯಾ ಆಳ್ವ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದರು ಅನ್ನೋ ಮಾಹಿತಿ ಕೂಡ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ. ಮತ್ತೊಂದು ಕಡೆ ಆದಿತ್ಯಾ ಆಳ್ವ ತಲೆಮರೆಸಿಕೊಳ್ಳೋದಕ್ಕೆ ರಿಕ್ಕಿ ರೈ ಸಹಾಯ ಮಾಡಿದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.

ಇಂದು ಬೆಳಗ್ಗೆ 6 ಗಂಟೆಗೆ ಸಿಸಿಬಿ ಪೊಲೀಸರು ಮಾಜಿ ಡಾನ್ ಮುತ್ತಪ್ಪ ರೈ ಅವರ ಬೆಂಗಳೂರಿನ ಹೊರವಲಯದ ಬಿಡದಿ ಹಾಗೂ ಸದಾಶಿವನಗರದಲ್ಲಿರುವ ನಿವಾಸಗಳ ಮೇಲೆ ದಾಳಿ ಮಾಡಿದ್ದರು.

- Advertisement -

Latest News

error: Content is protected !!