Wednesday, June 26, 2024
Homeತಾಜಾ ಸುದ್ದಿವಿಶ್ವವಿಖ್ಯಾತ ನಾಡ ಹಬ್ಬ ದಸರಾಗೆ ಚಾಲನೆ

ವಿಶ್ವವಿಖ್ಯಾತ ನಾಡ ಹಬ್ಬ ದಸರಾಗೆ ಚಾಲನೆ

spot_img
- Advertisement -
- Advertisement -

ಮೈಸೂರು : ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದ್ದಾರೆ.

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದೆ. ಈ ಬಾರಿ ಸರಳವಾಗಿ ಸಾಂಪ್ರದಾಯಿಕ ದಸರಾ ಆಚರಣೆ ನಡೆಯಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವರಾತ್ರಿ ಸಡಗರ ಸಂಭ್ರಮ ಮನೆ ಮಾಡಿದೆ. ಕೊರೋನಾ ಕಾರಣದಿಂದಾಗಿ ನಿಬಂಧನೆಗಳೊಂದಿಗೆ ಸಾಂಪ್ರದಾಯಿಕ ಕಾರ್ಯಕ್ರಮ ನಡೆಸಲಾಗುವುದು.

ಕಾರ್ಯಕ್ರಮದಲ್ಲಿ ಸಿಎಂ, ಡಾ.ಸಿ.ಎನ್. ಮಂಜುನಾಥ್, ಸಚಿವರಾದ ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಶಾಸಕರಾದ ಜಿ.ಟಿ. ದೇವೇಗೌಡ, ರಾಮದಾಸ್, ಸಂಸದ ಪ್ರತಾಪ್ ಸಿಂಹ, ಮೇಯರ್ ತಸ್ನೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

- Advertisement -
spot_img

Latest News

error: Content is protected !!