Sunday, October 18, 2026
Homeಪ್ರಮುಖ-ಸುದ್ದಿಮೈಸೂರು ದಸರಾ ವೇಳೆ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ಘೋಷಣೆ

ಮೈಸೂರು ದಸರಾ ವೇಳೆ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು ಶಿಕ್ಷೆ ಘೋಷಣೆ

- Advertisement -
- Advertisement -

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಕುಟುಂಬದ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಕಾರ್ತಿಕ್ (32) ಎಂಬಾತನಿಗೆ ಮೈಸೂರಿನ ತ್ವರಿತಗತಿ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

2025ರ ಅಕ್ಟೋಬರ್ 9ರಂದು ದಸರಾ ವಸ್ತುಪ್ರದರ್ಶನದ ಸಮೀಪ ಈ ಘಟನೆ ನಡೆದಿತ್ತು. ಗುಲ್ಬರ್ಗಾದಿಂದ ಮೈಸೂರಿಗೆ ಬಂದಿದ್ದ ಕುಟುಂಬದ ಬಾಲಕಿ ಟೆಂಟ್‌ನಲ್ಲಿ ಮಲಗಿದ್ದಾಗ ಆರೋಪಿ ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಕಳೆದ ವರ್ಷ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಇದೀಗ ತೀರ್ಪು ಪ್ರಕಟವಾಗಿದೆ.

- Advertisement -

Latest News

error: Content is protected !!