Monday, June 8, 2026
Homeಅಪರಾಧಮೈಸೂರು ಅತ್ಯಾಚಾರ ಪ್ರಕರಣ : ಐವರು ಆರೋಪಿಗಳ ಬಂಧನ

ಮೈಸೂರು ಅತ್ಯಾಚಾರ ಪ್ರಕರಣ : ಐವರು ಆರೋಪಿಗಳ ಬಂಧನ

- Advertisement -
- Advertisement -

ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.


ಘಟನೆ ನಡೆದ 85 ಗಂಟೆ ಬಳಿಕ ಶನಿವಾರ ಬೆಳಗ್ಗೆ ನಾಲ್ಕರಿಂದ ಐದು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಓರ್ವ ತಲೆಮರೆಸಿಕೊಂಡಿದ್ದು ಆತನ ಹುಡುಕಾಟ ನಡೆಯುತ್ತಿದೆ ಎಂದು ಮಾಹಿತಿ ಸಿಕ್ಕಿದೆ.

ಘಟನೆಗೆ ಸಂಬಂಧ ಪಟ್ಟಂತೆ ವಿದ್ಯಾರ್ಥಿನಿ ಸ್ನೇಹಿತನ ಮಾಹಿತಿ ಆಧರಿಸಿ ಹಾಗೂ ಮೊಬೈಲ್ ಟವರ್ ಆಧರಿಸಿ ಆರೋಪಿಗಳ ಜಾಡು ಪತ್ತೆ ಹಚ್ಚಿದ ಪೊಲೀಸರು ಮೈಸೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ತಮಿಳುನಾಡಿನ ಮೂವರು, ಕೇರಳದ ಓರ್ವ ಹಾಗೂ ಮೈಸೂರು ನಗರದ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಗಳನ್ನು ತಮಿಳುನಾಡು ಮತ್ತು ಕೇರಳದಿಂದ ಮೈಸೂರಿಗೆ ಕರೆದುಕೊಂಡು ಬರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಸಂಬಂಧ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಐದು ತಂಡ ರಚನೆ ಮಾಡಲಾಗಿತ್ತು. ಘಟನೆಗೆ ಸಂಬಂಧಪಟ್ಟಂತೆ ಸುಮಾರು 25 ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ ಪೊಲೀಸರು ಸ್ಥಳದಲ್ಲಿ ದೊರಕಿದ ಮದ್ಯದ ಬಾಟಲಿಗಳ ಆಧಾರದ ಮೇಲೆ ಸುತ್ತಾ ಮುತ್ತ ಇರುವ ಮದ್ಯದಂಗಡಿ ಜಾಲಾಡಿ ಅಲ್ಲಿನ ಸಿಸಿ ಟಿವಿ ಫೊಟೇಜ್ ಪಡೆದು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!