Monday, May 20, 2024
Homeತಾಜಾ ಸುದ್ದಿಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ; ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ; ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

spot_img
- Advertisement -
- Advertisement -

ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ಬ್ರೂಕ್ ಫೀಲ್ಡ್ ರಸ್ತೆಯಲ್ಲಿರುವ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢವಾಗಿ ಭಾರಿ ಸ್ಪೋಟ ಸಂಭವಿಸಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಮೇಶ್ವರಂ ಕೆಫೆ ಸ್ಥಳಕ್ಕೆ ಹೆಚ್​ಎಎಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೆಫೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ರಾಮೇಶ್ವರಂ ಕೆಫೆ ಸುತ್ತಮುತ್ತಲಿನ  ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನು ಈ ಸ್ಪೋಟದ ಕುರಿತು ಪ್ರಥಮ ಮಾಹಿತಿ ದೊರಕಿದ್ದು, ಗ್ರಾಹಕರೊಬ್ಬರ ಬ್ಯಾಗ್ ನಲ್ಲಿದ್ದ ವಸ್ತುವಿನಿಂದ ಈ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಊಟದ ಸಮಯ ಅಲ್ಲವಾ ಸ್ವಲ್ಪ ಜನಸಂದಣಿ ಇತ್ತು. ಸ್ಫೋಟದ ಸದ್ದು ಕೇಳಿ ಒಂದು ಕ್ಷಣ ಭಯವಾಯ್ತು. ಹೋಟೆಲ್​ನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ರಾಮೇಶ್ವರಂ ಕೆಫೆ ಪಕ್ಕದಲ್ಲಿಯೇ ಅಪಾರ್ಟ್​ಮೆಂಟ್​ ಗಳಿವೆ. ಆದರೆ ಯಾವುದೇ ದೊಡ್ಡ ಅನಾಹುತ ಆಗಿಲ್ಲ ಎಂದು ಪ್ರತ್ಯಕ್ಷದರ್ಶಿ ಮೋಹನ್ ಎಂಬವರು ಹೇಳಿದ್ದಾರೆ.

ಸುಮಾರು ಎಂಟರಿಂದ 10 ಜನರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಒಬ್ಬರ ಹಿಂಭಾಗದ ಬಟ್ಟೆ ಹರಿದು ಹೋಗಿತ್ತು ಎಂದು ಮೋಹನ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!