- Advertisement -
![]()
- Advertisement -
ಹಾಸನದ ಹಳೇಆಲೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದು 14 ತಿಂಗಳ ಕಂದಮ್ಮ ಅನಾಥವಾಗಿದೆ. ಸುರ್ದಶನ್ (32) ಹಾಗೂ ಕಾವ್ಯ (27) ದಮೃತ ದುರ್ದೈವಿಗಳು.
ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟ ಸಂಭವಿಸಿತ್ತು.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ದಂಪತಿಯನ್ನು ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸೋಮವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆದಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -


