Sunday, May 5, 2024
Homeತಾಜಾ ಸುದ್ದಿ“ಎಲ್ಲಿ ಜಾರಿತೋ ಮನವು” ಭಾವಗೀತೆ ಖ್ಯಾತಿಯ ಎನ್.‌ಎಸ್. ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

“ಎಲ್ಲಿ ಜಾರಿತೋ ಮನವು” ಭಾವಗೀತೆ ಖ್ಯಾತಿಯ ಎನ್.‌ಎಸ್. ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಎಲ್ಲಿ ಜಾರಿತೋ ಮನವು, ಎಲ್ಲೆ ಮೀರಿತೋ ಪ್ರಸಿದ್ದ ಭಾವಗೀತೆ ಬರೆದಿದ್ದ ಖ್ಯಾತ ಕವಿ ಎನ್.‌ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ನೈಲಾಡಿ ಶಿವರಾಮ ಲಕ್ಷ್ಮೀ ನಾರಾಯಣ ಭಟ್ಟ ಅವರು ಕನ್ನಡ ಭಾವಗೀತೆಗಳ ಲೋಕದಲ್ಲಿ ಅಮೂಲ್ಯ ಸಾಧನೆ ಮಾಡಿದವರು.1936ರ ನವೆಂಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದ್ದರು.ಬೆಂಗಳೂರಿನಲ್ಲಿ ಕಾಲೇಜು ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಹಿಂದೆ ಹೀಗೆ ಚಿಮ್ಮುತ್ತಿತ್ತು ಯಾವ ಘಳಿಗೆಯಲ್ಲಿ, ನೀರ ಮೇಲಿನ ಲೀಲೆ, ನಿತ್ಯ ನಿತ್ಯ ಭೂಮಿ, ಮಾಗಿ ಕೊರೆವ ಬಾಳಿಗೆ ಮುಂತಾದ ಭಾವಗೀತೆಗಳು ಪ್ರಸಿದ್ದಿಯಾಗಿದ್ದವು. ವೃತ್ತಿ, ಸುಳಿ, ನಿನ್ನದೆ ನನ್ನ ಮಾತು, ಹೊಳೆಯ ಸಾಲಿನ ಮರ, ಪಾಂಚಾಲಿ, ಅರುಣಗೀತೆ, ಚಿತ್ರಕೂಟ, ದೀಪಿಕಾ, ಬಾರೋ ವಸಂತ, ಸುನೀತಾ ಕವನ ಸಂಕಲನಗಳನ್ನು ಲಕ್ಷ್ಮೀ ನಾರಾಯಣ ಭಟ್ಟ ಬರೆದಿದ್ದರು.

- Advertisement -
spot_img

Latest News

error: Content is protected !!