Saturday, May 18, 2024
Homeಕರಾವಳಿಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, SDM ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ.ನ.ವಜ್ರಕುಮಾರ್ ನಿಧನ

ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, SDM ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ.ನ.ವಜ್ರಕುಮಾರ್ ನಿಧನ

spot_img
- Advertisement -
- Advertisement -

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, SDM ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ.ನ.ವಜ್ರಕುಮಾರ್ ಅವರು ಇಂದು ಮುಂಜಾನೆ ಧಾರವಾಡದಲ್ಲಿ ವಿಧಿವಶರಾಗಿದ್ದಾರೆ.

ಉಡುಪಿಯ  ಕೊಕ್ಕರ್ಣೆ ಅರಮನೆಯ ಶ್ರೀ.ಭೋಜರಾಜಯ್ಯ ಹಾಗೂ ಕುತ್ಯಾರು ಅರಮನೆಗೆ ಸೇರಿದ ಚಂದ್ರಮತಿ ಅಮ್ಮನವರ ದ್ವಿತೀಯ ಪುತ್ರರಾಗಿ ದಿನಾಂಕ .29.5.1939ರಂದು ಅವರು ನಂದಿಕೂರಿನಲ್ಲಿ ಜನಿಸಿದರು. ಅರ್ಥಶಾಸ್ತ್ರದಲ್ಲಿ MA ಮುಗಿಸಿದ ಇವರು ಎಂಜಿಎಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಜೀವನವನ್ನು ಆರಂಭಿಸಿದರು.1974 ರಲ್ಲಿ ಮೂಡಬಿದ್ರಿಯ ಸುಮನರೊಂದಿಗೆ ವಿವಾಹವಾದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜರ್ಷಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು 1973ರಲ್ಲಿ ಧಾರವಾಡದ ಜನತಾ ಶಿಕ್ಷಣ ಸಮಿತಿ ಸಂಸ್ಥೆಯನ್ನು ವಹಿಸಿಕೊಂಡ ಬಳಿಕ ಶ್ರೀಯುತರು ತಮ್ಮ ಕ್ರಿಯಾಶೀಲತೆ ಹಾಗೂ ಕಾರ್ಯದಕ್ಷತೆಗಳಿಂದ ಜೆಎಸ್ಎಸ್ ಸಂಸ್ಥೆಯ ಕಾರ್ಯದರ್ಶಿಗಳಾಗಿ ಎಂಜಿನಿಯರಿಂಗ್,ದಂತ ಮಹಾವಿದ್ಯಾಲಯ, ವೈದ್ಯಕೀಯ ಸಂಸ್ಥೆಗಳನ್ನು  ಸ್ಥಾಪಿಸಲು ಕಾರಣೀಭೂತರಾಗಿದ್ದಾರೆ.
  ಅವಿರತ ಶ್ರಮದಿಂದ ಶಿಕ್ಷಣಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿ ಧಾರವಾಡದಲ್ಲಿ ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸಿದ ಕೀರ್ತಿಯ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ ಹಾಗೂ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದಾತರಾಗಿ
ಅಜಾತಶತ್ರು ಗಳೆನಿಸಿಕೊಂಡಿದ್ದರು.

ಶ್ರೀಯುತರು ಜೈನ ಸಮಾಜದ ಹಿರಿಯರು ಮಾರ್ಗದರ್ಶಕರೂ ಆಗಿ ಧಾರವಾಡ ಜೈನ್ ಮಿಲನ್, ಧಾರವಾಡ ಇದರ ಮಹಾಪೋಷಕರು, ಸ್ಥಾಪಕರೂ ಆಗಿ ಹಲವಾರು ಧಾರ್ಮಿಕ ಕಾರ್ಯಗಳನ್ನು ಕೈಗೊಂಡು ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ.

ಇನ್ನು ಸಾರ್ವಜನಿಕರಿಗೆ ಇವರ ಪಾರ್ಥೀವ ಶರೀರದ ಅಂತಿಮದರ್ಶನಕ್ಕಾಗಿ ಇಂದು ಮುಂಜಾನೆ 8.00 ರಿಂದ 9.30 ತನಕ ಜೆಎಸ್ಎಸ್ ಸಂಸ್ಥೆಯ ಬನಶಂಕರಿ ಕಾಲೇಜು ಆವರಣದಲ್ಲಿ  ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

- Advertisement -
spot_img

Latest News

error: Content is protected !!