Thursday, June 4, 2026
Homeಕರಾವಳಿಉಡುಪಿಉಡುಪಿ: ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ

ಉಡುಪಿ: ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ

- Advertisement -
- Advertisement -

ಉಡುಪಿ: ಬೈಂದೂರಿನ ದೈವಜ್ಞ ಕೇರಿಯಲ್ಲಿರುವ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕುಂಭಾಭಿಷೇಕ ಮತ್ತು ಸ್ವಪರಿವಾರ ನಾಗಶಿಲಾ ಪ್ರತಿಷ್ಠೆ ಕಾರ್ಯಕ್ರಮ ನಡೆಯಿತು.

ಜ್ಯೋತಿಷಿ ವಿದ್ವಾನ್ ವಾಸುದೇವ ಜೋಷಿ ಹಾಲಾಡಿ ಅವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ ಜರುಗಿತು.

ಸಭಾ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.‌ ಇದೇ ವೇಳೆ ಜೀರ್ಣೋದ್ಧಾರ ಸಮಿತಿಯ ಸದಸ್ಯರನ್ನು ಗೌರವಿಸಲಾಯಿತು. ರವೀಂದ್ರ ಶೇಟ್ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಯು. ನಾಗರಾಜ್ ಶೇಟ್ ಉಡುಪಿ ಮತ್ತು ಬಳಗದಿಂದ ಸಂಗೀತ ಗಾನ ಸಂಭ್ರಮ ನಡೆಯಿತು.

- Advertisement -

Latest News

error: Content is protected !!