Thursday, April 25, 2024
Homeಕರಾವಳಿಮಂಜೇಶ್ವರ: ನಾಗರಪಂಚಮಿಯಂದು ಅನಂತೇಶ್ವರ ದೇವಸ್ಥಾನ ಭೇಟಿಗೆ ನಿರ್ಬಂಧ

ಮಂಜೇಶ್ವರ: ನಾಗರಪಂಚಮಿಯಂದು ಅನಂತೇಶ್ವರ ದೇವಸ್ಥಾನ ಭೇಟಿಗೆ ನಿರ್ಬಂಧ

spot_img
- Advertisement -
- Advertisement -

ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ, ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಎಂದಾಕ್ಷಣ ಬಹಳಷ್ಟು ವಿಶೇಷತೆಗಳಿರುತ್ತದೆ. ಈ ದೇವಳದಲ್ಲಿ ವಿಷ್ಣು, ಈಶ್ವರ ದೇವರೊಂದಿಗೆ ನಾಗದೇವರಿಗೆ ವಿಶಿಷ್ಟವಾದ ಸ್ಥಾನಮಾನವಿದೆ.

ನಾಗರ ಪಂಚಮಿ (ಇದೇ 25)ಯಂದು ದೇವಳಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಅಂತರವನ್ನು ಕಾಪಾಡುವುದು ಕಷ್ಟಕರವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇದೇ 25ರಂದು ಎಲ್ಲ ಭಕ್ತಾದಿಗಳಿಗೆ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಮಂಜೇಶ್ವರದ ಅನಂತೇಶ್ವರ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

25ರಂದು ಯಾವುದೇ ಭಕ್ತರು ದೇವಾಲಯಕ್ಕೆ ಭೇಟಿ ನೀಡದೇ ಸಹಕರಿಸಬೇಕು. ಅಂದು ದೇವಾಲಯದಲ್ಲಿ ಯಾವುದೇ ಸೇವೆಗಳು, ಸೇವಾ ಪ್ರಸಾದ ವಿತರಣೆ, ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆಗಳು ಇರುವುದಿಲ್ಲ. ಹಾಲು, ಸೀಯಾಳ, ಹಣ್ಣುಕಾಯಿ ಮತ್ತಿತರ ಯಾವುದೇ ಪೂಜಾ ಸಾಮಗ್ರಿಗಳನ್ನು ಸ್ವೀಕರಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -
spot_img

Latest News

error: Content is protected !!