Friday, June 5, 2026
Homeಕರಾವಳಿಬೆಳ್ತಂಗಡಿ; ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ವಿಧಿವಶ

ಬೆಳ್ತಂಗಡಿ; ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ವಿಧಿವಶ

- Advertisement -
- Advertisement -

ಬೆಳ್ತಂಗಡಿ; ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ (86) ವಿಧಿವಶರಾಗಿದ್ದಾರೆ. ಇಂದು (ಸೋಮವಾರ) ಬೆಳಿಗ್ಗೆ ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ಉದಯವಾಣಿ ಪತ್ರಿಕೆಯ ವರದಿಗಾರರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಶಿಕ್ಷಕರಾಗಿದ್ದ ಅವರು ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಉತ್ತಮ‌ ಪಾಂಡಿತ್ಯವನ್ನು ಹೊಂದಿದ್ದರು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ತಮ್ಮ ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಗಾಗಿ ಹಲವು ಪ್ರಶಸ್ತಿ ಗೌರವಗಳು ಅವರಿಗೆ ಸಂದಿದೆ.

- Advertisement -

Latest News

error: Content is protected !!