Friday, August 28, 2026
Homeತಾಜಾ ಸುದ್ದಿಹರ್ಷ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ನಳಿನ್ ಕುಮಾರ್ ಕಟೀಲ್...

ಹರ್ಷ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರು

- Advertisement -
- Advertisement -

ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಸೀಗೆಹಟ್ಟಿಯ ನಿವಾಸಕ್ಕೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಯಲ್ಲಿ ಸಚಿವ ಈಶ್ವರಪ್ಪ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸೇರಿ ಕೆಲವು ಶಾಸಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿದ್ದಾರೆಂದು ತಿಳಿದು ಬಂದಿದೆ.

ದುಷ್ಕರ್ಮಿಗಳಿಂದ ಬಲಿಯಾದ ಹರ್ಷನ ಕುಟುಂಬಕ್ಕೆ ಧೈರ್ಯ ಹಾಗೂ ಆತ್ಮಸ್ಥರ್ಯ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಅಲ್ಲದೆ ಘಟನೆಯ ಕುರಿತು ಸಂಪೂರ್ಣ ವರದಿ ನೀಡುವಂತೆಯೂ ಕೇಳಿದ್ದೇವೆ. ಈ ಕೃತ್ಯದ ಹಿಂದಿರುವ ಕಾಣದ ಶಕ್ತಿಗಳನ್ನು ನಾವು ಮಟ್ಟ ಹಾಕುತ್ತೇವೆ ಮಾತ್ರವಲ್ಲದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆಯನ್ನು ಹಾಗೂ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

- Advertisement -

Latest News

error: Content is protected !!