Sunday, May 5, 2024
Homeಕರಾವಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು; ಪುತ್ತೂರಿನಲ್ಲಿ ಡಿವಿ, ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ...

 ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು; ಪುತ್ತೂರಿನಲ್ಲಿ ಡಿವಿ, ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಸಲ್ಲಿಸಿದ ಆಕ್ರೋಶಿತರು

spot_img
- Advertisement -
- Advertisement -

ಪುತ್ತೂರು; ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಪುತ್ತೂರು ಮೂಲದ ನಳೀನ್ ಕುಮಾರ್ ಕಟೀಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಜೊತೆಗೆ ಕರಾವಳಿಯಲ್ಲಿ ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಡಿ ವಿ ಸದಾನಂದ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಇದರ ಬೆನ್ನಲ್ಲೇ ಆಕ್ರೋಶಿತರು ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಿ ವಿ ಸದಾನಂದ ಗೌಡ ಹಾಗೂ ನಳೀನ್ ಕುಮಾರ್ ಕಟೀಲ್  ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿದ್ದಾರೆ.

‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ’ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ. ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -
spot_img

Latest News

error: Content is protected !!