- Advertisement -
- Advertisement -
ಮಂಗಳೂರು : ಮಾರಕ ಸೋಂಕು ಕೊರೊನಾ ವಿರುದ್ಧದ ಹೋರಾಟಕ್ಕೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.
ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಒಂದು ತಿಂಗಳ ವೇತನವನ್ನು ದೇಣಿಗೆಯಾಗಿ ನೀಡುವುದಾಗಿ ನಿನ್ನೆಯಷ್ಟೇ ಹುಬ್ಬಳ್ಳಿ-ಧಾರವಾಡ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರು. ಇದರ ಬೆನ್ನಲ್ಲೇ ಇಂದು ನಳಿನ್ ಕುಮಾರ್ ಕಟೀಲ್ ತಮ್ಮ ಸಂಸದರ ನಿಧಿಯಿಂದ ಒಂದು ಕೋಟಿ ರೂ. ನೆರವು ನೀಡುವುದಾಗಿ ತಿಳಿಸಿದ್ದಾರೆ. ಕೊರೊನಾ ಸೋಂಕು ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮಾರಕ ರೋಗದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕೈಗೊಳ್ಳುವ ಕಾರ್ಯಗಳಿಗೆ ನಿಯಮಾನುಸಾರ ಅನುದಾನ ವಿನಿಯೋಗಿಸಲು ಸಂಸದ ಕಟೀಲ್ ಜಿಲ್ಲಾಡಳಿತಕ್ಕೆ ಸಮ್ಮತಿ ನೀಡಿದ್ದಾರೆ.
- Advertisement -
