Sunday, May 12, 2024
Homeಕರಾವಳಿಮಂಗಳೂರು-ವಿಜಯಪುರ ರೈಲು ಪುನರಾರಂಭ; ಸಮಯ ಬದಲಾವಣೆಗೆ ನಳೀನ್ ಕುಮಾರ್ ಕಟೀಲ್ ಮನವಿ!

ಮಂಗಳೂರು-ವಿಜಯಪುರ ರೈಲು ಪುನರಾರಂಭ; ಸಮಯ ಬದಲಾವಣೆಗೆ ನಳೀನ್ ಕುಮಾರ್ ಕಟೀಲ್ ಮನವಿ!

spot_img
- Advertisement -
- Advertisement -

ಮಂಗಳೂರು: ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದ್ದು, ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.ಈ ಮೊದಲು ಈ ರೈಲು ಮಂಗಳೂರು ಜಂಕ್ಷನ್‌ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡುತಿತ್ತು, ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಇದ್ದಂತೆ ರೈಲು ಬೆಳಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡಬೇಕು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಲಾಗಿದೆ.

ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್‌ ಯಾರ್ಡ್‌ ಅಥವಾ ಉಳ್ಳಾಲ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶವಿದೆ. ಸಮಯಕ್ಕೆ ಸರಿಯಾಗಿ ಹೊರಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ.

ಮಂಗಳೂರಿನಿಂದ ನೇರವಾಗಿ ಚೆನ್ನೈಗೆ ರೈಲು ಸಂಚಾರ ಆರಂಭಿಸಬೇಕು. ಮಂಗಳೂರು-ಹಾಸನ- ಬೆಂಗಳೂರು ಮಾರ್ಗವಾಗಿ ಚೆನ್ನೈಗೆ ರೈಲು ಓಡಿಸಬೇಕು ಎಂದು ನಳಿನ್‌ಕುಮಾರ್ ಕಟೀಲ್‌ ಮನವಿ ಮಾಡಿದ್ದಾರೆ.

ಮಂಗಳೂರು-ಚೆನ್ನೈ ನಡುವಿನ ರೈಲು ಪ್ರಸ್ತುತ ಪಾಲ್ಘಾಟ್, ಕೊಯಮತ್ತೂರು ಮಾರ್ಗವಾಗಿ ಸಂಚಾರ ನಡೆಸುತ್ತಿದೆ. ಮಂಗಳೂರು-ಹಾಸನ-ಚೆನ್ನೈ ಮೂಲಕ ರೈಲು ಸಂಚಾರ ನಡೆಸಿದರೆ ಸುಮಾರು 200 ಕಿ. ಮೀ. ಉಳಿತಾಯವಾಗಲಿದೆ ಎಂದು ಸಂಸದರು ಉಲ್ಲೇಖಿಸಿದ್ದಾರೆ.

- Advertisement -
spot_img

Latest News

error: Content is protected !!