Friday, June 5, 2026
HomeUncategorizedಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಚಾರ

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಚಾರ

- Advertisement -
- Advertisement -

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು.

ತೀರ್ಥಹಳ್ಳಿಯಲ್ಲಿ ವಿವಿಧ ಸಮಾಜ ಹಾಗೂ ವೃತ್ತಿಪರರೊಂದಿಗೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ನಳೀನ್ ಕುಮಾರ್ ಕಟೀಲ್, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ, ತೀರ್ಥಹಳ್ಳಿ ಶಾಸಕರಾದ ಅರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ ಮತ್ತು ಡಿ.ಎನ್. ಜೀವರಾಜ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೇ 7 ರಂದು ಶಿವಮೊಗ್ಗ ಸೇರಿದಂತೆ ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

- Advertisement -

Latest News

error: Content is protected !!