Saturday, May 4, 2024
Homeತಾಜಾ ಸುದ್ದಿಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ:ನಳೀನ್ ಕುಮಾರ್ ಕಟೀಲ್ ಸಂತಾಪ

ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ:ನಳೀನ್ ಕುಮಾರ್ ಕಟೀಲ್ ಸಂತಾಪ

spot_img
- Advertisement -
- Advertisement -

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ನಳೀನ್ ಕುಮಾರ್ ಕಟೀಲ್, ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು ಎಂದು ಹೇಳಿದ್ದಾರೆ.

ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದ ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, ಮನ್ ಕಿ ಬಾತ್ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು ಎಂದು ಕಟೀಲ್ ನೆನಪಿಸಿಕೊಂಡಿದ್ದಾರೆ.

ಕಾಮೇಗೌಡರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ನಳೀನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.

- Advertisement -
spot_img

Latest News

error: Content is protected !!