Saturday, December 3, 2022
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷದ್ದು ಭಾರತ ಬಿಟ್ಟು  ಓಡೋ ಯಾತ್ರೆ!: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

ಕಾಂಗ್ರೆಸ್ ಪಕ್ಷದ್ದು ಭಾರತ ಬಿಟ್ಟು  ಓಡೋ ಯಾತ್ರೆ!: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ, ಅದು ಭಾರತ ಬಿಟ್ಟು ಓಡೋ ಯಾತ್ರೆಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಭಿನ್ನಮತ ಹಾಗೂ ಸಮರ್ಥ ನಾಯಕತ್ವದ ಕೊರತೆಯಿಂದ ನೆಲಕಚ್ಚಲಿದೆ ಎಂದು ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ತೊರೆಯುವ ನಾಯಕರನ್ನು ಒಂದೆಡೆ ಸೇರಿಸಿ ಕಾಂಗ್ರೆಸ್ ಜೋಡೋ ಮಾಡಬೇಕಿದ್ದ ರಾಹುಲ್ ಗಾಂಧಿಯವರು ತಮ್ಮ ಮುತ್ತಾತ ನೆಹರೂ ಅವರು ದೇಶವನ್ನು ಇಬ್ಭಾಗ ಮಾಡಿದ್ದನ್ನು ಮರೆತಿದ್ದಾರೆ. ಇದು ಜಾಣಮರೆವಲ್ಲದೆ ಮತ್ತೇನಲ್ಲ. ಆದರೆ, 130 ಕೋಟಿ ಜನರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದು ಮಾಡಿ ದೇಶ ಜೋಡಿಸುವ ಕಾರ್ಯ ಮಾಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಶಾಶ್ವತವಾಗಿ ಮೂಲೆಗುಂಪು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಕ್ಷ. ಹಿಂದೂ ವಿರೋಧಿ ಜಾತಿ- ಜಾತಿಗಳ ನಡುವೆ, ಮತೀಯ ಸಂಘರ್ಷ ಹೆಚ್ಚಿಸುವ ಪಕ್ಷವಾದರೆ, ಬಿಜೆಪಿ ಸದಾ ಜನಹಿತ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಎಂಬುದು ಜನರಿಗೆ ಅರಿವಾಗಿದೆ. ಕಾಂಗ್ರೆಸ್ ಪಕ್ಷದ ಆರು ದಶಕಗಳ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳನ್ನು ಗಮನಿಸಿದ ಮಹಾಜನತೆ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪು ಮಾಡುವ ನಿರ್ಧಾರ ಮಾಡಿದ್ದಾರೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!