Thursday, June 4, 2026
Homeತಾಜಾ ಸುದ್ದಿಇಟಲಿಯ ಅಕ್ಕ ಭಾರತದಿಂದ ಓಡಲು ದಾರಿ‌ ಹುಡುಕುತ್ತಿದ್ದಾರೆ: ಬಿಜೆಪಿ‌ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...

ಇಟಲಿಯ ಅಕ್ಕ ಭಾರತದಿಂದ ಓಡಲು ದಾರಿ‌ ಹುಡುಕುತ್ತಿದ್ದಾರೆ: ಬಿಜೆಪಿ‌ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಬಿಜೆಪಿ ಮುಖಂಡರ ಪ್ರವಾಸಕ್ಕೆ ಜನರಿಂದ ಅತ್ಯುತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫಲಾನುಭವಿಗಳು ಆನಂದದಿಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ‌ ಸಮಾರಂಭದಲ್ಲಿ ಮಾತನಾಡಿದ ಕಟೀಲ್, ದೇಶ ಮಾತ್ರವಲ್ಲದೆ, ವೀರಶೈವ ಸಮಾಜವನ್ನೂ ಒಡೆಯಲು ಮುಂದಾದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.

ಭಾರತದಿಂದ ಓಡಲು ಇಟೆಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಇದು ಭಾರತ್ ಜೋಡೋ ಅಲ್ಲ. ಇದು ಯಶಸ್ವಿ ಆಗುವುದಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ವಿಶ್ವಾಸದಿಂದ ನುಡಿದರು.

ಭಯೋತ್ಪಾದನೆ, ಭ್ರಷ್ಟಾಚಾರವೇ ಕಾಂಗ್ರೆಸ್‍ನ ದೊಡ್ಡ ಕೊಡುಗೆ. 6 ದಶಕಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್ ಸದಾ ಕಾಲ ಹಗರಣಗಳನ್ನೇ ಮಾಡಿತು. ಶಾಸ್ತ್ರೀಜಿ ಹೊರತುಪಡಿಸಿ ಉಳಿದೆಲ್ಲ ಪ್ರಧಾನಿಗಳು ಭ್ರಷ್ಟರಾಗಿದ್ದರು. ಕಾಂಗ್ರೆಸ್ ಮುಖಂಡರೆಲ್ಲರೂ ಭ್ರಷ್ಟಾಚಾರ ಮಾಡಿದವರು ಎಂದು ಕಟೀಲ್ ಟೀಕಿಸಿದರು.

ಹಾಸ್ಟೆಲ್, ಹಾಸಿಗೆ, ಸೋಲಾರ್, ಶಾಲಾ ಮೊಟ್ಟೆ, ನೇಮಕಾತಿಯಲ್ಲೂ ಹಗರಣಗಳನ್ನು ಮಾಡಿದ್ದ, ಜಾತಿ-ಜಾತಿಗಳ ನಡುವೆ ಸಂಘರ್ಷ ತಂದಿಟ್ಟ ಸಿದ್ದರಾಮಣ್ಣನ ಕೊಡುಗೆಯನ್ನು ಜನರು ಮರೆತಿಲ್ಲ. ಅರ್ಕಾವತಿ ರೀಡೂ ಹಗರಣದಲ್ಲಿ ಸಿದ್ದರಾಮಣ್ಣ ಎಲ್ಲಿರುತ್ತಾರೆ ಎಂಬುದನ್ನು ಕಾದು ನೋಡಿ ಎಂದು ಹೇಳಿದ ಕಟೀಲ್, ಕಾಂಗ್ರೆಸ್ ಪಕ್ಷದ ಕೇಂದ್ರದ ಹಾಗೂ ರಾಜ್ಯದ ನಾಯಕರು ಜಾಮೀನಿನಡಿ ಇದ್ದಾರೆ ಎಂದು ಪ್ರಸ್ತಾಪಿಸಿದರು.

- Advertisement -

Latest News

error: Content is protected !!