Sunday, June 14, 2026
Homeಕರಾವಳಿಆಪರೇಷನ್ ಕಮಲ ಅನಿವಾರ್ಯ ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆ

ಆಪರೇಷನ್ ಕಮಲ ಅನಿವಾರ್ಯ ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆ

- Advertisement -
- Advertisement -

ಬೆಂಗಳೂರು: ಆಪರೇಷನ್ ಕಮಲವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಸಮರ್ಥಿಸಿಕೊಂಡಿದ್ದಾರೆ. ಆಪರೇಷನ್ ಕಮಲ ಅನಿವಾರ್ಯ‌ ಎಂದು ಇಂದು ಬೆಂಗಳೂರಿನಲ್ಲಿ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಕಟೀಲು, ಹಿಂದೆ ಆಪರೇಷನ್ ಕಮಲ ಮಾಡಿದಾಗ ಬೇರೆ ಪಕ್ಷಗಳಿಂದ ಕರೆದುಕೊಂಡು ಬರೋದೇ ನಿಮ್ಮ ಕೆಲಸನಾ ಅಂತ ಬಹಳ ಜನ ಕೇಳಿದರು. ಒಂದು ರಾಜಕೀಯ ಪಕ್ಷ ಅಧಿಕಾರ ಹಿಡಿಯಲು ಇದು ಅನಿವಾರ್ಯ ಎಂದು ಹೇಳಿದ್ದಾರೆ.

ಅಧಿಕಾರಕ್ಕಾಗಿ ಆಪರೇಷನ್ ಕಮಲ ಮಾಡಿರಬಹುದು.‌ ಆದ್ರೆ ನಮ್ಮ ಪಕ್ಷದಲ್ಲಿ ಪಕ್ಷಕ್ಕಾಗಿ ದುಡಿದವರು, ಸಾಮಾನ್ಯ ಕಾರ್ಯಕರ್ತನಿಗೂ ಶಾಸಕ ಮಾಡುತ್ತೇವೆ. ನಮ್ಮದು ಅಧಿಕಾರಕ್ಕಾಗಿ ಆದರ್ಶ ಅಲ್ಲ ಎಂದು ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಈಗಲೂ ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ಜೈ ಅಂತಾರೆ. ನಾವು ಭಾರತ ಮಾತೆಗೆ ಜೈಕಾರ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

- Advertisement -

Latest News

error: Content is protected !!