Sunday, June 7, 2026
Homeಕರಾವಳಿಆಡಿಯೋ ನಂದಲ್ಲ, ಕೋರ್ಟ್ ಮೊರೆ ಹೋಗುವ ಬಗ್ಗೆ ಚಿಂತನೆ: ನಳೀನ್ ಕುಮಾರ್ ಕಟೀಲ್

ಆಡಿಯೋ ನಂದಲ್ಲ, ಕೋರ್ಟ್ ಮೊರೆ ಹೋಗುವ ಬಗ್ಗೆ ಚಿಂತನೆ: ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ಅಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ,ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯುತ್ತೇನೆ, ಈ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದ್ದಾರೆ‌. ಅಲ್ಲದೇ ನಾಯಕತ್ವ ಬದಲಾವಣೆ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆಗಳಿಲ್ಲ, ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ,‌ ಅವರು ನಮ್ಮ ಸರ್ವ ಸಮ್ಮತದ ನಾಯಕ ಎಂದಿದ್ದಾರೆ. ಇದೇ ವೇಳೆ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದಿರುವ ಕಟೀಲ್, ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

- Advertisement -

Latest News

error: Content is protected !!