Thursday, June 4, 2026
Homeತಾಜಾ ಸುದ್ದಿಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ರಿಂದ ರಾಷ್ಟ್ರಧ್ವಜಕ್ಕೆ ಅಪಮಾನ: ರಾಷ್ಟ್ರ...

ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ರಿಂದ ರಾಷ್ಟ್ರಧ್ವಜಕ್ಕೆ ಅಪಮಾನ: ರಾಷ್ಟ್ರ ಧ್ವಜದ ಬ್ಯಾಡ್ಜ್ ಅನ್ನು ಉಲ್ಟಾ ಧರಿಸಿ ಪಥಸಂಚಲನ

- Advertisement -
- Advertisement -

ಬೆಂಗಳೂರು:ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ. ರಾಷ್ಟ್ರ ಧ್ವಜದ ಬ್ಯಾಡ್ಜ್ ಅನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ್ದಾರೆ.

ನಳೀನ್ ಕುಮಾರ್ ಕಟೀಲ್ ಹಾಗೂ ಭೈರತಿ ಬಸವರಾಜ್. ನಿನ್ನೆ ಕೆ.ಆರ್.ಪುರಂ ನಲ್ಲಿ ನಡೆದ ರೋಡ್ ಶೋ ನಲ್ಲಿ ಧ್ವಜಕ್ಕೆ ಅಪಮಾನ ಮಾಡಿದ್ದಾರೆ.

ಇನ್ನು ತಿಪಟೂರುನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ.ಈ ಸಂಬಂಧ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.

- Advertisement -

Latest News

error: Content is protected !!