Saturday, June 6, 2026
Homeಕರಾವಳಿಮಂಗಳೂರಿನ ಜಿಎಂಪಿಎಲ್ ಕಂಪನಿಯಲ್ಲಿ ನೇರ ಖಾಯಂ ಉದ್ಯೋಗಕ್ಕೆ ಕೇಂದ್ರ ಸಚಿವರಿಗೆ ಸಂಸದ ನಳೀನ್ ಕುಮಾರ್ ಕಟೀಲ್...

ಮಂಗಳೂರಿನ ಜಿಎಂಪಿಎಲ್ ಕಂಪನಿಯಲ್ಲಿ ನೇರ ಖಾಯಂ ಉದ್ಯೋಗಕ್ಕೆ ಕೇಂದ್ರ ಸಚಿವರಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಮನವಿ

- Advertisement -
- Advertisement -

ನವದೆಹಲಿ: ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇಲಾಖೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದಾರೆ.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಶೀಘ್ರದಲ್ಲಿಯೇ ಈ ಸಂಬಂಧ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!