Friday, June 5, 2026
Homeತಾಜಾ ಸುದ್ದಿವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯ ಸರ್ಕಾರ ಎಸ್.ಟಿ. ಮತ್ತು ಎಸ್.ಸಿ. ಮೀಸಲಾತಿ ಹೆಚ್ಚಳ ಮಾಡುವ ಕೆಲಸ ಮಾಡಿದ್ದು, ಇನ್ನುಳಿದ ಕೆಲಸವನ್ನು ಕೇಂದ್ರ ಸರ್ಕಾರ ಶೀಘ್ರ ಮಾಡಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ಕಚೇರಿ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!