- Advertisement -
- Advertisement -
ಬೆಂಗಳೂರು: ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಬೆಂಗಳೂರಿನಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಳೀನ್ ಕುಮಾರ್ ಕಟೀಲು ಯೋಗಾಸನ ಮಾಡಿದರು.
ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಳೀನ್ ಕುಮಾರ್ ಕಟೀಲು ಯೋಗಾಭ್ಯಾಸ ನಡೆಸಿದರು.
ಈ ವೇಳೆ ವ್ಯಾಸ ಯೋಗ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಆರ್. ರಾಮಕೃಷ್ಣ ಮತ್ತು ಚಲನಚಿತ್ರ ನಟಿ ಅದಿತಿ ಪ್ರಭುದೇವ ಪಾಲ್ಗೊಂಡಿದ್ದರು.
- Advertisement -