Thursday, June 25, 2026
Homeರಾಜಕೀಯಹುಬ್ಬಳ್ಳಿ ಗಲಭೆ ಪ್ರಕರಣವನ್ನು ಡಿ.ಜೆ. ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಮಾದರಿಯಲ್ಲೇ ತನಿಖೆ ನಡೆಸಬೇಕು:...

ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಡಿ.ಜೆ. ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಮಾದರಿಯಲ್ಲೇ ತನಿಖೆ ನಡೆಸಬೇಕು: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಗಲಾಟೆ ವೇಳೆ ದೇವಸ್ಥಾನ, ಪೊಲೀಸರ ಮೇಲೆ ದಾಳಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಪ್ರಕರಣ ಪೂರ್ವನಿಯೋಜಿತ, ಗಲಾಟೆ ವೇಳೆ ದೇವಸ್ಥಾನ, ಪೊಲೀಸರ ಮೇಲೆ ದಾಳಿ ನಡೆದಿದ್ದು, ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

ಇನ್ನು ಡಿ.ಜೆ. ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಮಾದರಿಯಲ್ಲೇ ತನಿಖೆ ನಡೆಸಲಾಗುವುದು. ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಿಡುವುದಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಅವಧಿಯಲ್ಲಿಯೇ ಹೆಚ್ಚು ಗಲಭೆಗಳು ನಡೆದಿದ್ದವು. ಅವರ ಕಾಲದಲ್ಲಿಯೇ ಹೆಚ್ಚು ಹಿಂದೂ ಯುವಕರ ಹತ್ಯೆಗಳಾಗಿವೆ. ಅವರ ಅವಧಿಯಲ್ಲಿಯೇ ಗಲಭೆಕೋರರಿಗೆ ಬಿ ರಿಪೋರ್ಟ್ ನೀಡಿದ್ದರು ಎಂದು ಆರೋಪಿಸಿದ್ದಾರೆ.

- Advertisement -

Latest News

error: Content is protected !!