Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಹಾಸನ: ಒಕ್ಕಲಿಗ ನಾಯಕರೊಬ್ಬರಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಹಾಗೆಯೆ ಯಡಿಯೂರಪ್ಪ ತನ್ನ ಮಗನಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಕೆಲದಿನಗಳಿಂದ ಹರಿದಾಡುತ್ತಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಎಂದು ಸುಳ್ಳು ಸುದ್ದಿ ಹರಡುವವರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಶ್ರವಣಬೆಳಗೊಳದಲ್ಲಿ ಬಿಜೆಪಿ ಕಾರ್ಯಕರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಊಹಾಪೋಹವಷ್ಟೇ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!