Thursday, June 4, 2026
Homeಕರಾವಳಿಕಾಂಗ್ರೆಸ್ ಆಂತರಿಕ ಜಗಳದಿಂದಲೇ ರಾಜ್ಯ ಸರ್ಕಾರ ಪತನ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

ಕಾಂಗ್ರೆಸ್ ಆಂತರಿಕ ಜಗಳದಿಂದಲೇ ರಾಜ್ಯ ಸರ್ಕಾರ ಪತನ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಿಂದಲೇ ರಾಜ್ಯ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್,
ಕಾಂಗ್ರೆಸ್‌ನಲ್ಲಿ ಈಗ ಮೂರು ಗುಂಪುಗಳಾಗಿದ್ದು,
ತಮ್ಮ ಬೀದಿ ಜಗಳವನ್ನು ಮರೆ ಮಾಚಲು ಸುಳ್ಳು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕಟೀಲ್, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆಗಿನ ಹೊಂದಾಣಿಕೆ ಕುರಿತು ಪಕ್ಷದ ಕೇಂದ್ರೀಯ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಆರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದು, ಸೀಟು ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಜನವರಿ ತಿಂಗಳ ಬಳಿಕ ಮತ್ತಷ್ಟು ವೇಗ ಸಿಗಲಿದ್ದು, ಎಲ್ಲಾ ಸರ್ವೆಗಳನ್ನು ಮಾಡಿ ಟಿಕೆಟ್ ಹಂಚಿಕೆ ಆಗುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

- Advertisement -

Latest News

error: Content is protected !!