- Advertisement -
- Advertisement -
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸುಳ್ಯ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ತಾಲೂಕು ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಹಾಗೂ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಭಾನುಮತಿ ಅವರೊಂದಿಗೆ ಕೊರೊನಾ ತಡೆಗೆ ಆಸ್ಪತ್ರೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಆ ನಂತರ ಸಂಸದರು ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ ಅಲ್ಲಿ ಪಕ್ಷದ ಪ್ರಮುಖರೊಂದಿಗೆ ಕೊರೊನಾ ಸಂಬಂಧ ಸುಳ್ಯ ತಾಲೂಕಿನಲ್ಲಿ ನಡೆಯುತ್ತಿರುವ ಆಗು ಹೋಗುಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಭೊದ್ ಶೆಟ್ಟಿ ಮೇನಾಲ, ವಿನಯ್ ಕಂದಡ್ಕ, ಸುರೇಶ್ ಕಣೆಮರಡ್ಕ, ಮಹೇಶ್ ರೈ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -