Sunday, June 23, 2024
Homeಮಹಾನ್ಯೂಸ್ಮುಂಬೈನಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ

ಮುಂಬೈನಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ

spot_img
- Advertisement -
- Advertisement -

ಮುಂಬೈ: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮುಂಬೈನಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪ್ರಚಾರ ನಡೆಸಿದ್ದಾರೆ‌.

ಮಹಾರಾಷ್ಟ್ರದ ಥಾಣೆ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನರೇಶ್ ಮಾಸ್ಕೆ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ನಳೀನ್ ಕುಮಾರ್ ಕಟೀಲ್ ಮತ್ತು ರಾಜೇಶ್ ನಾಯ್ಕ್ ಮತಯಾಚನೆ ಮಾಡಿದರು.

ಇದೇ ಸಂಧರ್ಭದಲ್ಲಿ ಬಿಜೆಪಿ ಥಾಣೆ ಜಿಲ್ಲಾಧ್ಯಕ್ಷ ಸಂಜೀವ್ ವಾಗೂಲೆ, ಮುಖಂಡರಾದ ಸುಕುಮಾರ್ ಶೆಟ್ಟಿ, ಸಚ್ಚಿದಾನಂದ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಕಳೆದ ಕೆಲವು ದಿನಗಳಿಂದ ಸಂಸದ ನಳೀನ್ ಕುಮಾರ್ ಕಟೀಲ್ ಮುಂಬೈನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಮೇ 13 ರಂದು ಮಹಾರಾಷ್ಟ್ರದ ಹನ್ನೊಂದು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

- Advertisement -
spot_img

Latest News

error: Content is protected !!