- Advertisement -
- Advertisement -
ಬೆಳಗಾವಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಫೈಟ್ ಇದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿದ್ದರಾಮಯ್ಯ, ಕಟೀಲು ಬಿಜೆಪಿ ಅಧ್ಯಕ್ಷನಾಗಲು ಲಾಯಕ್ ಅಲ್ಲಾ ಅವನು, ಏನೇನೋ ಬಾಯಿಗೆ ಬಂದ ಹಾಗೆ ಮಾತನಾಡುವುದು, ಅವನು ಇನ್ನೂ ಇಮ್ ಮೆಚ್ಯೂರ್ಡ್ ಪೊಲಿಟಿಷಿಯನ್ ಎಂದು ಹೇಳಿದ್ದಾರೆ.
ಅಲ್ಲದೇ ಅವನ ಬಗ್ಗೆ, ಅವರ ಮಾತುಗಳ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಸಿದ್ದರಾಮಯ್ಯ ನಳೀನ್ ಕುಮಾರ್ ಕಟೀಲ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ಬೆಂಬಲಕ್ಕೆ ನಿಂತಿದ್ದಾರೆ ಎಂಬ ಕಟೀಲ್ ಹೇಳಿಕೆಗೆ ಉತ್ತರಿಸಿರುವ ಸಿದ್ದರಾಮಯ್ಯ, ನಮ್ಮ ಪಾರ್ಟಿಯಲ್ಲಿ ಎಲ್ಲರೂ ಒಪ್ಪಿಕೊಂಡೇ ಹೈಕಮಾಂಡ್‌ಗೆ ಹೇಳಿ ಎರಡನೇ ಅಭ್ಯರ್ಥಿ ಹಾಕಿರುವುದು ಎಂದು ತಿಳಿಸಿದ್ದಾರೆ.
- Advertisement -