Friday, June 5, 2026
Homeಕರಾವಳಿಸತೀಶ್ ಕುಂಪಲ ಅಧ್ಯಕ್ಷತೆಯಲ್ಲಿ ಮತ್ತೆ ದ.ಕ. ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ: ಮಂಗಳೂರಿನಲ್ಲಿ ಸಂಸದ ನಳೀನ್ ಕುಮಾರ್...

ಸತೀಶ್ ಕುಂಪಲ ಅಧ್ಯಕ್ಷತೆಯಲ್ಲಿ ಮತ್ತೆ ದ.ಕ. ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ: ಮಂಗಳೂರಿನಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಮಂಗಳೂರು: ಸತೀಶ್ ಕುಂಪಲ ಅಧ್ಯಕ್ಷತೆಯಲ್ಲಿ ಮತ್ತೆ ದ‌ಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಿ‌ನ ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಈ ಹೇಳಿಕೆ ನೀಡಿದ್ದಾರೆ.

28 ಲೋಕಸಭಾ ಕ್ಷೇತ್ರಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿರುವ ನಳೀನ್ ಕುಮಾರ್ ಕಟೀಲ್, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ದಬ್ಬಾಳಿಕೆ ಮತ್ತು ಹಿಂದೂ ದಮನ ಆರಂಭವಾಗಿದ್ದು,ಹನುಮ ಮತ್ತು ರಾಮನ ಶಾಪ ಸಿದ್ದರಾಮಯ್ಯಗೆ ತಟ್ಟುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ, ರಾಜ್ಯ ಸರ್ಕಾರ ಹನುಮ ಧ್ವಜವನ್ನು ಕಿತ್ತೆಸೆಯುವ ಕೆಲಸ ಮಾಡಿದೆ ಎಂದು ಹೇಳಿರುವ ಸಂಸದ ಕಟೀಲ್, ವಿಜಯೇಂದ್ರ ನೇತೃತ್ವದಲ್ಲಿ ಸಿದ್ಧರಾಮಯ್ಯ ಸರ್ಕಾರದ ಹಿಂದೂ ದಮನ ನೀತಿ ವಿರುದ್ಧ ಹೋರಾಟ ನಡೆಯಲಿದೆ ಎಂದಿದ್ದಾರೆ.

- Advertisement -

Latest News

error: Content is protected !!