Thursday, June 4, 2026
Homeಕರಾವಳಿತಮಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?

ತಮಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು?

- Advertisement -
- Advertisement -

ಮಂಗಳೂರು; ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಮಿಸ್ ಆಗಿರುವ ಬಗ್ಗೆ ಮಂಗಳೂರಿನಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ., ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸುತ್ತೇನೆ. ಕಳೆದ 15 ವರ್ಷಗಳಿಂದ ಪಕ್ಷ ನನಗೆ ಅವಕಾಶವನ್ನ ಕೊಟ್ಟಿದೆ. ಮತದಾರರು 15 ವರ್ಷಗಳಿಂದ ಆಶೀರ್ವಾದ ಮಾಡಿದ್ದಾರೆ. ರಾಜಕಾರಣಕ್ಕೆ ಯುವಕರು ಬರಬೇಕು. ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಪಕ್ಷ ಏನು ಹೇಳುತ್ತೋ ಅದನ್ನ ಮಾಡುವವನು ನಾನು. ನನಗೆ ಕೊಟ್ಟ ಸಹಕಾರ ಕ್ಯಾ.ಬ್ರಿಜೇಶ್​ ಚೌಟಗೆ ಕೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!