Sunday, October 18, 2026
Homeಕರಾವಳಿಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಕೇಸನ್ನು ವಾಪಾಸ್ ಪಡೆಯಲು ನಳಿನ್‌ಕುಮಾರ್ ಕಟೀಲ್ ಆಗ್ರಹ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಕೇಸನ್ನು ವಾಪಾಸ್ ಪಡೆಯಲು ನಳಿನ್‌ಕುಮಾರ್ ಕಟೀಲ್ ಆಗ್ರಹ

- Advertisement -
- Advertisement -

ಮಂಗಳೂರು : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸು ದಾಖಲಾಗಿರೋದನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ,ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಈ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಡಾ.ಪ್ರಭಾಕರ ಭಟ್ ವಿರುದ್ದ ಹಾಕಿರುವ ಸುಳ್ಳು ಕೇಸನ್ನು ತಕ್ಷಣ ವಾಪಸು ಪಡೆಯಬೇಕೆಂದು ಸಂಸದರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!