ಪುತ್ತೂರಿನಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಮೇಲೆ ನನಗೆ ಅಪಾರ ಗೌರವವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಿನ್ನೆ ಪುತ್ತೂರಿಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
. ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸಲಿದೆ. ಪುತ್ತೂರಿನ ಬಿಜೆಪಿ ಬಂಡಾಯದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಅರುಣ್ ಕುಮಾರ್ ಪುತ್ತಿಲ ಮೇಲೆ ಅಪಾರ ಗೌರವವಿದೆ ಎಂದರು. ಸಂಘಟನೆಯಲ್ಲಿ ಗುರುತಿಸಿ,ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಆ ಮೂಲಕ ಸ್ಪರ್ಧಿಸಿದ್ದು, ಬಿಜೆಪಿ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಲಿದೆ ಎಂದಿದ್ದಾರೆ.


