Monday, April 29, 2024
Homeಕರಾವಳಿಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿದ್ರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡ್ತೀವಿ; ಬಿಜೆಪಿ ರಾಜ್ಯಾಧ್ಯಕ್ಷ...

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿದ್ರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡ್ತೀವಿ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ

spot_img
- Advertisement -
- Advertisement -

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿದ್ರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡ್ತೀವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.

ಐದು ಗ್ಯಾರಂಟಿ ಯೋಜನೆ ಜಾರಿಗೆ ಸಂಬಂಧ ಸಾಲು ಸಾಲು ಸಭೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಘೋಷಿಸಿದ  ಗ್ಯಾರಂಟಿ ಜಾರಿಗಾಗಿ ಕಸರತ್ತು ನಡೆಸುತ್ತಿದೆ. ಯೋಜನೆಯ ಜಾರಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕೂ ಮುಂದಾದಿಗೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದ್ರೇ ರಾಜ್ಯಾಧ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ತಮ್ಮ ಗ್ಯಾರಂಟಿಗಳ ಅನುಷ್ಠಾನಕ್ಕೆ ತಲೆದೋರಿರುವ ಹಣಕಾಸಿನ ಸಮಸ್ಯೆ ಸರಿದೂಗಿಸಲು ಕಾಂಗ್ರೆಸ್ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳಕ್ಕೆ ಮುಂದಾಗಲಿದೆಯೆಂದು ಕೇಳಿಬಂದಿದೆ. ಇದೇನಾದರೂ ಜಾರಿಯಾದ್ದೆ ಆದಲ್ಲಿ ರಾಜ್ಯಾದ್ಯಂತ ನಮ್ಮ ಬಿಜೆಪಿ ಕಾರ್ಯಕರ್ತರೊಂದಿಗೆ ಬೀದಿಗಿಳಿದು ಪ್ರತಿಭಟಿಸಲಿದ್ದೇವೆ ಎಂದಿದ್ದಾರೆ.

- Advertisement -
spot_img

Latest News

error: Content is protected !!