Friday, June 5, 2026
Homeಕರಾವಳಿಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಘಟನೆಯನ್ನು ಖಂಡಿಸಿದ ಬಿಜೆಪಿ...

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಘಟನೆಯನ್ನು ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್, “ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಒಂಭತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅವರ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದು  ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಧಿತರನ್ನು ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಕರೆದೊಯ್ದಿದ್ದಾರೆ.

- Advertisement -

Latest News

error: Content is protected !!