Wednesday, June 24, 2026
Homeಕರಾವಳಿಮಂಗಳೂರು: ರಸ್ತೆಯಲ್ಲಿ ನಮಾಜ್ ಪ್ರಕರಣ; ಪೊಲೀಸರು ದಾಖಲಿಸಿದ್ದ ಸುಮೋಟೋ ಪ್ರಕರಣ ರದ್ದು?

ಮಂಗಳೂರು: ರಸ್ತೆಯಲ್ಲಿ ನಮಾಜ್ ಪ್ರಕರಣ; ಪೊಲೀಸರು ದಾಖಲಿಸಿದ್ದ ಸುಮೋಟೋ ಪ್ರಕರಣ ರದ್ದು?

- Advertisement -
- Advertisement -

ಮಂಗಳೂರು: ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಂಕನಾಡಿ ಮಸೀದಿ ಮುಂಭಾಗ ರಸ್ತೆಯಲ್ಲಿ ನಮಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಸುಮೋಟೋ ಪ್ರಕರಣ ರದ್ದಾಗಿದೆ ಎಂದು ತಿಳಿದು ಬಂದಿದೆ.

ಮೇ 24ರಂದು ಮಧ್ಯಾಹ್ನ ನಮಾಝ್ ನಿರ್ವಹಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದರು.

ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಹಿಂದೂ ಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತಲ್ಲದೇ, ಸುಮೋಟೋ ಪ್ರಕರಣ ದಾಖಲಿಸಿದ್ದಕ್ಕೆ ಮುಸ್ಲಿಂ ಸಮುದಾಯದಿಂದ ಅಸಮಾಧಾನ ಕೇಳಿ ಬಂದಿತ್ತು.

ಇದೀಗ ಸುಮೋಟೋ ಪ್ರಕರಣವನ್ನು ರದ್ದುಪಡಿಸಲಾಗಿದೆ ಎನ್ನಲಾಗಿದ್ದು, ಇನ್ನಷ್ಟೇ ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ಖಚಿತಗೊಳಿಸಬೇಕಾಗಿದೆ

- Advertisement -

Latest News

error: Content is protected !!