Wednesday, June 3, 2026
Homeತಾಜಾ ಸುದ್ದಿಶಾಲೆಯಲ್ಲಿ ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: ಸಚಿವ ಬಿ.ಸಿ.ನಾಗೇಶ್‌

ಶಾಲೆಯಲ್ಲಿ ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ: ಸಚಿವ ಬಿ.ಸಿ.ನಾಗೇಶ್‌

- Advertisement -
- Advertisement -

ಬೆಂಗಳೂರು: ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶಮೂರ್ತಿಯನ್ನ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ. ಆದ್ರೆ ನಮಾಜ್‌ಗೆ ಅವಕಾಶ ಕೊಡೋಕೆ ಸಾಧ್ಯವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ಮುಸ್ಲಿಂ ಸಂಘಟನೆಗಳು ಕ್ಯಾಂಪಸ್ ನಲ್ಲಿ ಗಣೇಶೋತ್ಸವ ಆಚರಣೆ ಮಾಡಿದರೆ ನಮಾಜ್‌ಗೂ ಅವಕಾಶ ಕೊಡಿ ಎಂದು ವಾದ ಮುಂದಿಟ್ಟಿವೆ.

ಈ ಬಗ್ಗೆ ಮಾತನಾಡಿದ ಸಚಿವರು, ಹಿಂದೆ ಯಾವ ನಿಯಮಗಳು ಇದ್ದವೋ ಅದೇ ನಿಯಮ ಈಗಲೂ ಇವೆ. ಗಣೇಶ ಹಬ್ಬ ಬಿಜೆಪಿ ಸರ್ಕಾರ ಬಂದಾಗಿನಿಂದ ಮಾಡಿದ್ದು ಅಲ್ಲ. ಬ್ರಿಟಿಷರ ಕಾಲದಿಂದಲೂ ಗಣೇಶೋತ್ಸವ ಮಾಡಿಕೊಂಡು ಬರಲಾಗ್ತಿದೆ. ಹಿಂದೆ ಯಾವ ರೀತಿ ನಡೆಯುತ್ತಿತ್ತೋ ಅದೇ ರೀತಿ ನಡೆದುಕೊಂಡು ಬರಲಿದೆ. ಶಿಕ್ಷಣ ಇಲಾಖೆಯಿಂದ ಅನುಮತಿ ಕೊಟ್ಟಿದ್ದಾರೆ ಅನ್ನೋದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!